ಉಡುಪಿ: ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆಶಾ ಆತ್ಮಹತ್ಯೆ
ಉಡುಪಿ: ಉಡುಪಿ ಜಿಲ್ಲೆಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಶಾ ಎಸ್ (52) ಜೀವಾಂತ್ಯ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಆಶಾ ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿದ್ದ ಆಶಾ ಅವರು ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು ಬಳಿಕ ಅಪರಾಹ್ನ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ಯಾಂಕ್ ಮೂಲಗಳ ಪ್ರಕಾರ ಆಶಾ ಅವರು ತಮ್ಮ ಚಿನ್ನವನ್ನು ಪತಿಯ ಹೆಸರಿನಲ್ಲಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿದ್ದರು. ಚಿನ್ನವನ್ನು ಲಾಕರ್‌ನಲ್ಲಿ ಇಡುವ ಜವಾಬ್ದಾರಿಯನ್ನು ಅವರೇ ನಿಭಾಯಿಸುತ್ತಿದ್ದರು.





