March 22, 2026

ತುಮಕೂರು:  ಕಾರಿನಲ್ಲಿ ಸುಟ್ಟು ಸ್ಥಿತಿಯಲ್ಲಿ ಮೂವರ ಮೃತದೇಹ ಪತ್ತೆ: ಬೆಳ್ತಂಗಡಿ ಮೂಲದ ಮುಸ್ಲಿಂ ಸಮುದಾಯದ ಮೂವರ ಮೃತದೇಹ

0
image_editor_output_image501529689-1711108374167

ತುಮಕೂರು: ಕುಚ್ಚಂಗಿ ಕೆರೆಯ ಬಳಿ ಕಾರೊಂದು ಸಂಪೂರ್ಣ ಸುಟ್ಟು ಹೋಗಿದ್ದು, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56) , ಶಿರ್ಲಾಲ್ ನಿವಾಸಿ ಇಮ್ತಿಯಾಝ್(34) ಎಂದು ಗುರುತಿಸಲಾಗಿದೆ. ಇಂದು ಸಾರ್ವಜನಿಕರು ಕೆರೆಗೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ.

ಇನ್ನು, ಘಟನೆ ಸಂಬಂಧ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದು, ಕಾರಿನಲ್ಲಿ ಪತ್ತೆಯಾಗಿರುವ ಮೃತದೇಹಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *

error: Content is protected !!