September 25, 2026

ಅಂಗನವಾಡಿ ಕೇಂದ್ರದಲ್ಲಿದ್ದ ಸಂಪ್‌ಗೆ ಬಿದ್ದು ಬಾಲಕಿ ಮೃತ್ಯು

0
image_editor_output_image-1345088979-1711151558660.jpg

ಎಚ್.ಡಿ.ಕೋಟೆ: ತಾಲೂಕಿನ ಅಂತರಸಂತೆ ಸಮೀಪದ ಬಂಗ್ಲಿ ಹುಂಡಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿದ್ದ ಸಂಪ್ ಗೆ ಬಿದ್ದು 3ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ವರದಿಯಾಗಿದೆ.

ಮೃತ ಬಾಲಕಿಯನ್ನು ಬಂಗ್ಲಿಹುಂಡಿ ಗ್ರಾಮದ ನಿವಾಸಿ ಸ್ವಾಮಿ ಮತ್ತು ಅಂಜು ದಂಪತಿಯ ಪುತ್ರಿ ಸನ್ನಿಧಿ ಎಂದು ಗುರುತಿಸಲಾಗಿದೆ. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಗೀತ ಮತ್ತು ಸಹಾಯಕಿಯ ನಿರ್ಲಕ್ಷ್ಯದಿಂದ ಮಗು ಸಂಪ್‌ ಗೆ ಬಿದ್ದು ಸಾವನಪ್ಪಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

 

ಘಟನೆಗೆ ಸಂಬಂಧಿಸಿದಂತೆ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ತಾಲೂಕು ಸಿಡಿಪಿಒ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆ ಗೀತ ವಿರುದ್ದ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನೆರವೇರಿಸಿ ವಾರಸುದಾರರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *

You may have missed

error: Content is protected !!