March 22, 2026

ವಿಟ್ಲ: ಪೇಟೆಯ ಅಂಗಡಿಗಳಿಗೆ ನುಗ್ಗಿದ ಕಳ್ಳರು: ನಗದು, ದಿನಸಿ ದೋಚಿದ ಖದೀಮರು

0
image_editor_output_image131404675-1711172081075

ವಿಟ್ಲ: ವಿಟ್ಲ ಪೇಟೆಯ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಹಿಂಭಾಗ ವಶಪಡಿಸಿಕೊಂಡ ವಾಹನಗಳನ್ನು ಸಂಗ್ರಹಿಸಿಡುವ ಸ್ಥಳವಿದ್ದು, ಅದಕ್ಕೆ ಹೋಗುವ ರಸ್ತೆಯಲ್ಲೇ ಮಹಮ್ಮದ್ ಹಾಜಿ ಮಾಲೀಕತ್ವದ ದಿನಸಿ ಅಂಗಡಿಯಿದ್ದು, ಅದಕ್ಕೆ ಕಳ್ಳರು ಕನ್ನ ಹಾಕಿದ್ದಾರೆ.

ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಕಳ್ಳರು ಕೃತ್ಯ ಎಸಗಿರುವುದು ಕಾಣಿಸುತ್ತಿದೆ. ದಿನಸಿ ಅಂಗಡಿಯ ಹಿಂಭಾಗದಲ್ಲಿ ಛಾವಣಿಯ ಹಂಚು ತೆಗೆದು ಒಳ ನುಗ್ಗಿರುವ ಕಳ್ಳರು, ಕ್ಯಾಶ್ ಕೌಂಟರ್ ನಲ್ಲಿದ್ದ ರೂ 8000 ಮತ್ತು ಕಟ್ಟಿಟ್ಟಿದ್ದ ದಿನಸಿ ಸಾಮಾಗ್ರಿಯನ್ನು ಹೊತ್ತೊಯ್ದಿದ್ದಾರೆ.

ಬಳಿಕ ಪಕ್ಕದ ದೀಪಕ್ ಬೀಡಿ ಕಂಟ್ರಾಕ್ಟರ್ ನಿಸಾರ್ ವಿ.ಎಸ್. ಅವರಿಗೆ ಸೇರಿದ ಬೀಡಿ ಬ್ರ್ಯಾಂಚ್ ಹಿಂಬದಿ ಬಾಗಿಲು ಮುರಿದು ಒಳ ನುಗ್ಗಿದ್ದ ಕಳ್ಳರು, ಸಂಪೂರ್ಣ ಜಾಲಾಡಿ ಅಲ್ಲಿದ್ದ ಚಿಲ್ಲರೆ ಹಣವನ್ನು ಕದ್ದಿದ್ದಾರೆ. ಬಳಿಕ ದೂರವಿರುವ ಮೇಗಿನ ಪೇಟೆಯಲ್ಲಿರುವ ಫೆಲಿಸ್ ಪಾಯಸ್ ಅವರಿಗೆ ಸೇರಿದ ಕೋಳಿಯ ಅಂಗಡಿಯ ಕಿಟಕಿ ಕಿತ್ತು ತೆಗೆದು ಒಳ ನುಗ್ಗಿದ ಕಳ್ಳರು, ಅಲ್ಲಿ ಕೂಡ ಒಂದಷ್ಟು ನಗದು ದೋಚಿದ್ದಾರೆ.


Leave a Reply

Your email address will not be published. Required fields are marked *

error: Content is protected !!