ಮಂಗಳೂರು: ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು: ಬಿಜೆಪಿ ಹಿರಿಯ ನಾಯಕಿಯ ಮೊಮ್ಮಗ ಸ್ಥಳದಲ್ಲೇ ಸಾವು
ಮಂಗಳೂರು: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಶಮಿತ್ ಶೆಟ್ಟಿ(29) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಶಮಿತ್ ಶೆಟ್ಟಿಯವರ ಸ್ನೇಹಿತನ ಮನೆಯಲ್ಲಿ ದೈವದ ಕೋಲದಲ್ಲಿ ಭಾಗವಹಿಸಿದ ಬಳಿಕ ತೊಕ್ಕೊಟ್ಟಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ.
ಕಾರಿನ ಮುಂಭಾಗ ಯಾವುದೆಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





