February 4, 2026

25 ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಮಂಗಳೂರಿನ ಮೂಡಾ ಕಮಿಷನರ್ ಲೋಕಾಯುಕ್ತ ಬಲೆಗೆ

0
IMG-20240323-WA0151

ಮಂಗಳೂರು: 25 ಲಕ್ಷ ರೂಪಾಯಿ ಲಂಚ ಪಡೆಯುವಾಗ ಮಂಗಳೂರಿನ ಮೂಡಾ ಕಮಿಷನರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಾ.23ರಂದು ನಡೆದಿದೆ.

ಮಂಗಳೂರು ಮುಡಾ ಕಮಿಷನರ್ ಮನ್ಸೂರ್ ಅಲಿ ಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

TDR ಕ್ಲಿಯರೆನ್ಸ್ ಮಾಡಲು 25 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಮಂಗಳೂರಿನ ಮೂಡಾ ಕಮಿಷನರ್ ಮನ್ಸೂರ್ ಆಲಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಬ್ರೋಕರ್ ಸಲೀಂ ಕೂಡ ಲೋಕಾಯುಕ್ತರು ಬಂಧಿಸಿದ್ದಾರೆ. ಮಂಗಳೂರಿನ ಮೂಡಾ ಕಚೇರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದೆಂದು ಈ ಹಿಂದೆಯೇ ಹಲವು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದರು. ಇದೀಗ ಲಂಚ ಪಡೆಯುವಾಗಲೇ ಕಮಿಷನರ್ ಬಂಧನ ಆಗಿರುವುದು ಇದಕ್ಕೆ ಸಾಕ್ಷಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!