ಕೇಬಲ್ ವೈರ್ ಮೈಮೇಲೆ ಬಿದ್ದು ವಿದ್ಯುತ್ ಸ್ಪರ್ಶ: ನರ್ಸ್ ಸಾವು
ತುಮಕೂರು:ಬೈಕ್‌ನಲ್ಲಿ ತೆರಳುತ್ತಿರುವ ವೇಳೆ ಕೇಬಲ್ ವೈರ್ ಮೈಮೇಲೆ ಬಿದ್ದು ವಿದ್ಯುತ್ ಸ್ಪರ್ಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದುರ್ಮರಣಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ಬೈಕ್ ಸವಾರ ಲಕ್ಷ್ಮಣ್ ಗೆ ಗಂಭೀರ ಗಾಯಗೊಂಡಿದ್ದು, ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟೆ ಮೂಲದ ಲಕ್ಷ್ಮೀ ಬಾಯಿ ಜಾಧವ್ (36) ಮೃತ ನರ್ಸ್.
ಲಕ್ಷ್ಮೀ ಬಾಯಿ ಜಾಧವ್ ಅವರು ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕುಣಿಗಲ್ ಪಟ್ಟಣದಲ್ಲಿ ವಾಸವಿದ್ದ ಲಕ್ಷ್ಮೀಬಾಯಿ, ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮಣ್ ಜೊತೆ ಬೈಕ್ನಲ್ಲಿ ಬರುತ್ತಿದ್ದರು.





