September 25, 2026

ಲೋಕಸಭೆ ಚುನಾವಣೆ: ಕಾಂಗ್ರೆಸ್ ನಿಂದ ಸಸಿಕಾಂತ್ ಸೆಂಥಿಲ್ ಗೆ ಟಿಕೆಟ್: ದ.ಕ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸೆಂಥಿಲ್

0
image_editor_output_image-1299642335-1711239465086

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ 46 ಅಭ್ಯರ್ಥಿಗಳ ನಾಲ್ಕೆನೇ ಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ.

ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ ಟಿಕೆಟ್ ನೀಡಲಾಗಿದೆ.

 

ಅಸ್ಸಾಂ 1, ಅಂಡಮಾನ್ ನಿಕೋಬಾರ್ 1, ಚತ್ತೀಸ್ ಗಡ್ 1, ಜಮ್ಮು ಕಾಶ್ಮೀರ 2, ಮಧ್ಯಪ್ರದೇಶ 12, ಮಹಾರಾಷ್ಟ್ರ 4, ಮಣಿಪುರ 2, ಮಿಜೋರಾಂ 1, ರಾಜಸ್ಥಾನ 3, ತಮಿಳುನಾಡು 7, ಉತ್ತರ ಪ್ರದೇಶ 9, ಉತ್ತರಾಖಂಡ 2, ಪಶ್ಚಿಮ ಬಂಗಾಳದ 1 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!