ಮಂಗಳೂರಿನ ಜೆರೋಸಾ ಶಾಲೆಯ ಪ್ರಕರಣ: ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಶರಣ್ ಪಂಪ್‌ವೆಲ್ ಸೇರಿದಂತೆ ಐವರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಮಂಗಳೂರಿನ ಸಂತ ಜೆರೋಸಾ ಶಾಲೆಯಲ್ಲಿ ಹಿಂದೂ ದೇವರಿಗೆ ಅಪಮಾನ ಎಸಗಲಾಗಿದೆ ಎಂದು ಆರೋಪಿಸಿ ನಡೆದಿದ್ದ ಪ್ರತಿಭಟನೆಗೆ ಸಂಬಂಧಿಸಿದ ಶಾಸಕರಾದ ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಸಂಘಪರಿವಾರದ ಶರಣ್ ಪಂಪ್‌ವೆಲ್ ಸೇರಿದಂತೆ ಐವರ ವಿರುದ್ಧದ ಪೊಲೀಸ್ ತನಿಖೆಗೆ ರಾಜ್ಯ ಹೈಕೋರ್ಟ್ ತಡೆ ನೀಡಿ ಮಧ್ಯಾಂತರ ಆದೇಶ ನೀಡಿದೆ.
ಈ ಪ್ರಕರಣದಲ್ಲಿ ನಮ್ಮನ್ನು ರಾಜಕೀಯ ಕಾರಣಕ್ಕಾಗಿ, ಕಿರುಕುಳ ನೀಡುವುದು ಮತ್ತು ಅಪಮಾನಿಸುವ ಉದ್ದೇಶದಿಂದ ಸಿಲುಕಿಸಲಾಗಿದ್ದು, ಹಾಗಾಗಿ ಪ್ರಕರಣದ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ವೇದವ್ಯಾಸ್ ಕಾಮತ್ ಮತ್ತಿತರರು ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ, ದೂರುದಾರರ ಅರ್ಜಿಯನ್ನು ಪುರಸ್ಕರಿಸಿ ರಾಜ್ಯ ಸರಕಾರ ಮತ್ತು ಪ್ರತಿವಾದಿ ಅನಿಲ್ ಜೆರಾಲ್ಡ್ ಲೋಬೋ ಅವರಿಗೆ ನೋಟಿಸ್ ಜಾರಿಗೊಳಿಸಿತು.





