ನಟಿ ಕಂಗನಾಗೆ ಬಿಜೆಪಿ ಟಿಕೆಟ್: ಈಕೆ ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತೇ?
ದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಬಿಜೆಪಿ ಈ ಬಾರಿ ಲೋಕಸಭೆ ಟಿಕೆಟ್ ನೀಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ರಣಾವತ್ ಸ್ಪರ್ಧೆ ಮಾಡಲಿದ್ದಾರೆ.
ಇಂದು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಕಂಗನಾ ರಣಾವತ್ ಅವರಿಗೆ ಈಗ ಬಿಜೆಪಿ ಟಿಕೆಟ್ ನೀಡಿದೆ.
ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಧಿಕೃತವಾಗಿ ಕಂಗನಾ ರಣಾವತ್ ಅವರು ರಾಜಕೀಯದ ಅಖಾಡಕ್ಕೆ ಇಳಿಯುತ್ತಿದ್ದಾರೆ





