ಕಲಬುರಗಿ: ವಿಪಕ್ಷ ನಾಯಕ ಆರ್.ಅಶೋಕ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾದಾಗ ನಿರಾಕರಿಸಿದ್ದಾರೆ. ಕುಂಕುಮ ಹಣೆಗೆ ಇಡಲು ನಿರಾಕರಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.