ಟ್ರಾಫಿಕ್ ಪೊಲೀಸ್ ಠಾಣೆಯ ಆವರಣದಲ್ಲೇ ಕೊಳೆತ ಸ್ಥಿತಿಯಲ್ಲಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಬೆಳಗಾವಿ: 40- 45 ವರ್ಷದ ವ್ಯಕ್ತಿಯ ಶವ ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ನ ಹಿಂಬದಿ ಸೀಟ್ನಲ್ಲಿ ಕೊಳೆತ ಸ್ಥಿತಿಯಲ್ಲಿತ್ತು.
ಹತ್ತು ದಿನಗಳ ಹಿಂದೆಯೇ ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯೋ ಅಥವಾ ಸಹಜ ಸಾವೋ ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಭಿಕ್ಷೆ ಬೇಡುತ್ತಿದ್ದ ಅಪರಿಚಿತ ವ್ಯಕ್ತಿ ಪೊಲೀಸ್ ಠಾಣಾ ಆವರಣದಲ್ಲಿ ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ನ ಹಿಂಬದಿ ಸೀಟ್ನಲ್ಲಿ ಕುಳಿತಿರುವಾಗಲೇ ಜೀವ ಹೋಗಿದ್ದು 10 ದಿನದ ಬಳಿಕ ಮೃತ ದೇಹ ಪತ್ತೆಯಾಗಿದೆ.
ದೇಹ ಕೊಳೆತು ವಾಸನೆ ಬಂದ ಕಾರಣ ಸಿಬ್ಬಂದಿ ಸ್ಥಳಕ್ಕೆ ಹೋಗಿ ನೋಡಿದಾಗ ಶವ ಇರುವುದು ಪತ್ತೆಯಾಗಿದೆ. ಘಟನೆ ಸಂಬಂಧ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯೋ ಅಥವಾ ಸಹಜ ಸಾವೋ ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.