ಮತ್ತೆ ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ
ಬೆಂಗಳೂರು: ಕೆಆರ್ ಪಿಪಿ ಪಕ್ಷದ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಸಮ್ಮುಖದಲ್ಲಿ ಜನಾರ್ದನ ರೆಡ್ಡಿ ಬಿಜೆಪಿ ಸೇರಿದರು.
ಅವರಿಗೆ ವಿಜಯೇಂದ್ರ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು. ಮಾಜಿ ಸಚಿವರಾದ ಸಿ.ಟಿ.ರವಿ, ಬಿ.ಶ್ರೀರಾಮುಲು, ಸಂಸದ ಪಿ.ಸಿ.ಮೋಹನ್ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿಯಲ್ಲಿ ಕೆಆರ್‌ಪಿಪಿ ಪಕ್ಷವನ್ನೂ ವಿಲೀನಗೊಳಿಸಿದ್ದಾರೆ. ನಿನ್ನೆ ರಾಜ್ಯ ಬಿಜೆಪಿ ನಾಯಕರೊಂದಿಗೆ ನಡೆದ ಸಭೆಯಲ್ಲಿ ಬಿಜೆಪಿಗೆ ಸೇರಲು ಜನಾರ್ದನ ರೆಡ್ಡಿ ಒಪ್ಪಿಕೊಂಡಿದ್ದರು. ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಯ ಎಲ್ಲ ಬೆಂಬಲಿಗರ ಜೊತೆ ಜನಾರ್ದನ ರೆಡ್ಡಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇತ್ತೀಚೆಗಷ್ಟೇ ಜನಾರ್ದನ ರೆಡ್ಡಿ ಭೇಟಿ ಮಾಡಿದ್ದರು.





