May 6, 2026

ಶಿವಮೊಗ್ಗ: SSLC ಪರೀಕ್ಷಾ ದಿನವೇ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

0
image_editor_output_image1794873323-1711346620389.jpg

ಶಿವಮೊಗ್ಗ: ಪರೀಕ್ಷಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆನಂದಪುರದ KPSC ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ.

ಆದ್ರೆ ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!