ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ: ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತ್ಯು
ಮೈಸೂರು: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಹೆಳವರಹುಂಡಿ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್‍ನ ಹಿಂಬದಿ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಿ.ನರಸೀಪುರದ ಆದಿಬೆಟ್ಟಳ್ಳಿಯ ನಾಗರಾಜು (35) ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ಬಿಳಿಗಿರಿ (30) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.





