May 6, 2026

ಉಳ್ಳಾಲ: ಡಿವೈಡರಿಗೆ ಡಿಕ್ಕಿ ಹೊಡೆದ ಬೈಕ್: ಮಹಿಳೆ ಮೃತ್ಯು

0
image_editor_output_image-635420961-1711354305623.jpg

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸಹ ಸವಾರೆ ಮೃತ ಪಟ್ಟರೆ ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ಳಾಲದ ನಾಟೆಕಲ್ ಬಳಿ ನಡೆದಿದೆ.

ಮಂಗಳೂರು ನಗರದ ಬೋಂದೇಲ್ ನಿವಾಸಿ ಶ್ರೀನಿಧಿ (29) ಮೃತ ದುರ್ದೈವಿ ಮಹಿಳೆಯಾಗಿದ್ದರೆ.

ಸವಾರ ಯತೀಶ್ ದೇವಾಡಿಗ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿ ವಾಪಸ್ಸಾಗುವ ಸಂದರ್ಭ ಬೈಕ್, ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಈ ದುರ್ಘಟನೆ ನಡೆದಿದೆ.

ಇನ್ನು ಮೃತ ಶ್ರೀನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರೆ, ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!