ಉಳ್ಳಾಲ: ಬೈಕ್ ಅಪಘಾತ: ಸಹ ಸವಾರೆ ಮಹಳೆ ಮೃತಪಟ್ಟ ಬೆನ್ನಲ್ಲೇ ಸವಾರ ಸಾವು
ಉಳ್ಳಾಲ: ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಉಳ್ಳಾಲದ ನಾಟೆಕಲ್ ಸಮೀಪ ನಡೆದಿದೆ. ಬೈಕ್ ಅಪಘಾತ ಸಂಭವಿಸಿ ಸಹಸವಾರ ವಿವಾಹಿತ ಮಹಿಳೆ ಸಾವನ್ನಪ್ಪಿದ್ದರು.
ಮೃತಪಟ್ಟ ಸವಾರ ಯತೀಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿ ವಾಪಸ್ಸಾಗುವ ಸಂದರ್ಭ ಬೈಕ್, ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗೌಂಡ್ ಸಮೀಪ ಡಿವೈಡರ್ ಗೆ ಬಡಿದು ಈ ದುರ್ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಬೈಕ್ ನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ದೀಕ್ಷಿತ್ ಎಂಬವರ ಪತ್ನಿ ಶ್ರೀನಿಧಿ ಹಾಗೂ ಬೈಕ್ ಸವಾರ ಯತೀಶ್ ದೇವಾಡಿಗ ಎಂಬವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿಧಿ ಅವರು ಮೃತಪಟ್ಟಿದ್ದು, ಇದೀಗ ಬೈಕ್ ಸವಾರ ಯತೀಶ್ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.





