ಬಾಲಕಿಯ ಅಕ್ರಮ ದತ್ತು ಪ್ರಕರಣ: ನಟಿ ಸೋನು ಗೌಡಗೆ ನ್ಯಾಯಾಂಗ ಬಂಧನ
ಬೆಂಗಳೂರು: ಬಾಲಕಿಯ ಅಕ್ರಮ ದತ್ತು ಪ್ರಕರಣದಲ್ಲಿ ನಟಿ ಸೋನು ಗೌಡಗೆ ಏಪ್ರಿಲ್ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದಿದ್ದರು ಪೊಲೀಸರು. ಇಂದು ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು.
ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ (ಮಾ.24) ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ಮಾಡಿದ್ದರು.





