ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಕಾರು ಕಳ್ಳತನ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಪತ್ನಿಗೆ ಸೇರಿದ್ದ ಕಾರು ಕಳ್ಳತನವಾಗಿರುವ ಘಟನೆ ರಾಷ್ಟ್ರರಾಜಧಾನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಟೊಯೊಟಾ ಫಾರ್ಚೂನರ್ ಕಾರನ್ನು ಕಳ್ಳತನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ತಿಂಗಳ ಮಾರ್ಚ್ 19ರಂದು ಮಧ್ಯಾಹ್ನ 3 ಗಂಟೆ ವೇಳೆಯಲ್ಲಿ ಕಳ್ಳತನ ನಡೆದಿದೆ ಎಂದು ಹೇಳಲಾಗಿದೆ.





