ಬೆಳ್ತಂಗಡಿ: ಸ್ಕೂಟಿ, ಪಿಕಪ್ ನಡುವೆ ಅಪಘಾತ: ಸವಾರ ಮೃತ್ಯು, ಹಿಂಬದಿ ಸವಾರ ಗಂಭೀರ
ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಹಳೇಕೋಟೆ ಬಳಿ ಸೋಮವಾರ ಅಪರಾಹ್ನ ಸಂಭವಿಸಿದೆ.
ಬೆಳ್ತಂಗಡಿ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ದ್ವಿತೀಯ ಪುತ್ರ ಪುರುಷೋತ್ತಮ (19) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್ (17) ಗಂಭೀರ ಗಾಯಗೊಂಡಿದ್ದಾನೆ.
ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದಿಂದ ಇಬ್ಬರು ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದರು. ಪುರುಷೋತ್ತಮ ಮೃತಪಟ್ಟರೆ, ತೌಫೀಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.





