February 4, 2026

ದಕ್ಷಿಣ ಕನ್ನಡ ಚುನಾವಣಾ ಪ್ರಚಾರದ ಉಸ್ತುವಾರಿಯಾಗಿ ರಮಾನಾಥ ರೈ ನೇಮಕ

0
image_editor_output_image-583916509-1711413135309.jpg

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ಪ್ರಚಾರದ ಉಸ್ತುವಾರಿಯಾಗಿ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ.ರಮಾನಾಥ ರೈ ಅವರನ್ನು ಆಯ್ಕೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಅಲ್ಲದೆ, ಹಾಸನ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಗಳನ್ನು ಯಶಸ್ವಿಗೊಳಿಸಬೇಕೆಂದು ಆದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!