February 4, 2026

ಕಡಬ: ಸಾಲ ಮರುಪಾವತಿಸಲು ಸಾಧ್ಯವಾಗದೆ ಕೃಷಿಕ ವಿಷಸೇವಿಸಿ ಆತ್ಮಹತ್ಯೆ

0
image_editor_output_image1920156428-1711435901376.jpg

ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ.

ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61)ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ.

ತಮ್ಮ ಮನೆಯಿಂದ ಅನತಿ ದೂರದ ಗುಡ್ಡೆಯೊಂದರಲ್ಲಿ ಶಿವಣ್ಣ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ ಗೌಡ ಅವರು ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಾಗಿ ರೂ.10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ.

ಸಾಲ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎನ್ನುವ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರ ಹೇಮಂತ್ ಅವರು ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!