September 25, 2026

ಬೆಳ್ತಂಗಡಿ: ಯುದ್ದ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದೆ: ಡಿ.ಕೆ.ಶಿವಕುಮಾರ್

0
image_editor_output_image-2036252127-1711436293592.jpg

ಬೆಳ್ತಂಗಡಿ: ಲೋಕಸಭೆ ಚುನಾವಣೆ ಈ ಯುದ್ದ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ ಅಣ್ಣಪ್ಪಸ್ವಾಮಿ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗೋ ಪದ್ಧತಿ, ಪರಂಪರೆ ಇಟ್ಟುಕೊಂಡಿದ್ದೇನೆ ಎಂದು ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಧರ್ಮಸ್ಥಳಕ್ಕೆ ಆಗಮಿಸಿದ ಅವರು ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವಾಗಲೂ ಧರ್ಮಯುದ್ಧದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ, ಮಾತು ಬಿಡದ ಮಂಜುನಾಥ, ಕಾಸು ಬೆಳೆದ ತಿಮ್ಮಪ್ಪ ಅಂತಾ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ ಅಣ್ಣಪ್ಪಸ್ವಾಮಿ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗೋ ಪದ್ಧತಿ, ಪರಂಪರೆ ಇಟ್ಟುಕೊಂಡಿದ್ದೇನೆ ಈ ಹಿನ್ನಲೆ ಇವತ್ತು ಇಲ್ಲಿಗೆ ಬಂದು ಮಂಜುನಾಥನ ದರ್ಶನ ಪಡೆದು ಹೊರಡುತ್ತಿದ್ದೇನೆ ಎಂದರು.

 

Leave a Reply

Your email address will not be published. Required fields are marked *

You may have missed

error: Content is protected !!