March 22, 2026

ಬ್ರಹ್ಮಾವರ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ಮೃತ್ಯು

0
image_editor_output_image1081331098-1711452990533

ಬ್ರಹ್ಮಾವರ: ದೋಣಿಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾನದಿಯಲ್ಲಿ ಮಾ.೨೬ರಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ.

ಮೃತರನ್ನು ಹೊಸಾಳ ಗ್ರಾಮದ ಶ್ರೀಶ(21) ಹಾಗೂ ಪ್ರಶಾಂತ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಇವರಿಬ್ಬರು ಮೀನು ಹಿಡಿಯಲೆಂದು ನಾಗರಮಠದ ಸೀತಾನದಿಗೆ ದೋಣಿಯಲ್ಲಿ ತೆರಳಿದ್ದರು. ಅಲ್ಲಿ ಇವರು ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ನೀರಿಗೆ ಬಿದ್ದರೆನ್ನಲಾಗಿದೆ.

ಕೂಡಲೇ ಸ್ಥಳೀಯರು ಮುಳುಗುತ್ತಿರುವ ಇವರ ರಕ್ಷಣೆಗೆ ಧಾವಿಸಿದರು. ಆದರೆ ನೀರಿನ ಸೆಳೆತದಿಂದಾಗಿ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳ, ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!