February 3, 2026

ಚಿಕ್ಕಮಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4 ಕೋಟಿ ರೂ.ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ

0
image_editor_output_image-1589489401-1711499360705.jpg

ಚಿಕ್ಕಮಗಳೂರು: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.

6 ಕೆಜಿ 586 ಗ್ರಾಂ ಚಿನ್ನ (Gold), 1 ಕೆಜಿ 71.492 ಗ್ರಾಂ ವಜ್ರಾಭರಣ, 1 ಕೆಜಿ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ಒಂದು ಕಾರು ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಹೀಗಾಗಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಕೋಟ್ಯಂತರ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿವೆ.

ಸಾಗಿಸಲಾಗುತ್ತಿದ್ದ ಚಿನ್ನ, ಬೆಳ್ಳಿ, ಡೈಮಂಡ್ಗಳ ದಾಖಲೆಗಳನ್ನು ಕೇಳಿದಾಗ ಸಂಬಂಧಪಟ್ಟವರು ದಾಖಲೆ ನೀಡಿಲ್ಲ. ಹೀಗಾಗಿ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿ ಚಿನ್ನಾಭರಣದ ಮೂಲದ ಕುರಿತು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!