ಭಟ್ಕಳ: ಅಪರಿಚಿತ ತಂಡದಿಂದ ಮಾರಕಾಸ್ತ್ರಗಳಿಂದ ಹಲ್ಲೆ:
ಮಂಗಳೂರು ಮೂಲದ ವ್ಯಕ್ತಿಗಳಿಂದ ಕೃತ್ಯ
ಭಟ್ಕಳ: ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭಟ್ಕಳ ಮುಷಾ ನಗರದ ಬದ್ರಿಯಾ ಕಾಲೊನಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಸದ್ದಾಂ ಹುಸೇನ್ ತಾಲ್ಲೂಕಿನ ಜಾಲಿ ರೋಡ್ ನಿವಾಸಿ ಎಂದು ತಿಳಿದು ಬಂದಿದೆ.
ಈತ ಬದ್ರಿಯಾ ಕಾಲೋನಿಯಲ್ಲಿರುವ ಕಿರಾಣಿ ಅಂಗಡಿಯಲ್ಲಿ ಕುಳಿತಿದ್ದ ವೇಳೆ ಕಾರಿನಲ್ಲಿ ಬಂದ ಐದಾರು ಮಂದಿ ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರದಿಂದ ಆತನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ನಂತರ ಹಲ್ಲೆಗೊಳಗಾದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಹಲ್ಲೆಯಿಂದ ಸದ್ದಾಂ ಹುಸೇನ್ ಕೈ ಕಾಲು ಹೊಟ್ಟೆ ಹಾಗೂ ಮೈ ಭಾಗದಲ್ಲಿ ಗಾಯಾಗಳಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ನಡೆದ ಸ್ಥಳದ ಅಕ್ಕ ಪಕ್ಕದಲ್ಲಿದ್ದ ಸಿಸಿಟಿವಿ ಪರಿಶೀಲಿಸಿ ನಡೆಸಿದ್ದು ಆರೋಪಿಗಳು ಮಂಗಳೂರು ಮೂಲದವರು ಎಂದು ಶಂಕಿಸಲಾಗಿದೆ. ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





