ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಪ್ರಮುಖ ಸಾಕ್ಷಿದಾರ ರಾಮಕುಮಾರ್ ಕೊಲೆಗೆ ಯತ್ನ: ದೂರು ದಾಖಲು

ಚಿಕ್ಕಮಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಪ್ರಮುಖ ಸಾಕ್ಷಿದಾರ ರಾಮಕುಮಾರ್ ಕೊಲೆಗೆ ಯತ್ನ ನಡೆದಿದ್ದು, ಈ ಸಂಬಂಧ ದೂರು ದಾಖಲಾಗಿದೆ.
ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ತೆಗೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಧನರಾಜ್ ಎಂಬಾತ ಬೇಲ್ ಮೇಲೆ ಜೈಲಿನಿಂದ ಹೊರಬಂದು ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿದ ಘಟನೆ ಚಿಕ್ಕಮಗಳೂರಿನ ಕಡೂರಿನಲ್ಲಿ ಬೆಳಕಿಗೆ ಬಂದಿದೆ.
ಟಿಕೆಟ್ ಡೀಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿರುವ ರಾಮಕುಮಾರ್ ಕೊಲೆಗೆ ಯತ್ನಿಸಲಾಗಿದೆ ಎಂಬ ಆರೋಪ ಕೆಳಿ ಬಂದಿದೆ.
ಸಲೂನ್ ಮಾಲೀಕನಾಗಿರುವ ರಾಮಕುಮಾರ್ ಮೇಲೆ ಚಿಕ್ಕಮಗಳೂರಿನ ಕಡೂರಿನಲ್ಲಿ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ.
ಗೋವಿಂದ ಪೂಜಾರಿ ಟಿಕೆಟ್ ವಂಚನೆ ಆರೋಪಿಗಳಿಂದ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ನಕಲಿ ಪ್ರಚಾರಕನನ್ನು ಸೃಷ್ಟಿಸಿದ್ದ ಸಲೂನ್ ಮಾಲೀಕನ ಮೇಲೆ ದಾಳಿಗೆ ಯತ್ನಿಸಲಾಗಿದೆ.