September 25, 2026

ಪತ್ನಿಯ ಕಿರುಕುಳ: ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

0
image_editor_output_image1350214827-1711583112930.jpg

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದಿಟ್ಟು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಮೃತ ಟೆಕ್ಕಿಯನ್ನು ಸೈಯ್ಯದ್ ಅಕ್ಮಲ್ ಅನ್ಸರ್ ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರು ಮಕ್ಕಳಾದ ಬಳಿಕ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡು ಪತಿಗೆ ನಿರಂತರ ಕಿರುಕುಳ ನೀಡುತ್ತಿದ್ದಳು.

 

ಇದೇ ಕಾರಣಕ್ಕೆ ಬೇಸತ್ತು, ಗೋಡೆಯ ಮೇಲೆ ತನ್ನ ಸಾವಿಗೆ ಕಾರಣರಾದವರ ಹೆಸರುಗಳನ್ನ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ.

7 ವರ್ಷಗಳ ಹಿಂದೆ ಅಕ್ಮಲ್ ಅನ್ಸರ್‌ಗೆ ವಿವಾಹವಾಗಿತ್ತು. ಆರಂಭದಲ್ಲಿ ಇಬ್ಬರೂ ಚೆನ್ನಾಗಿಯೇ ಇದ್ದರು. ಮಕ್ಕಳಾದ ಬಳಿಕ, ಮೃತ ಅಕ್ಮಲ್ ಅನ್ಸರ್ ಮೇಲೆ ಅನುಮಾನ ಪಟ್ಟು ಪತ್ನಿ ಕಿರುಕುಳ ಕೊಡ್ತಿದ್ದಳು.

ಅಷ್ಟೇ ಅಲ್ಲದೇ ಆಗಾಗ ಪತಿ ಬಳಿ ಹಣಕ್ಕೆ ಬೇಡಿಕೆ ಸಹ ಇಡುತ್ತಿದ್ದಳು. ಒಂದು ತಿಂಗಳ ಹಿಂದೆ ಗಲಾಟೆ ಮಾಡಿಕೊಂಡು ಗೋವಿಂದಪುರದ ಗಂಡನ ಮನೆಯಿಂದ ಬಿಟಿಎಂ ಲೇಔಟ್ ತಾಯಿ ಮನೆಗೆ ಬಂದಿದ್ದಳು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!