February 3, 2026

ಮಡಿಕೇರಿ: ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಕಳ್ಳರ ಕೈಚಳಕ: 7 ಬಿಜೆಪಿ ಮುಖಂಡರ ಪರ್ಸ್ ಕಳವು

0
image_editor_output_image1647160954-1711583418867.jpg

ಮಡಿಕೇರಿ: ಬುಧವಾರ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಂಡಿದ್ದ ಬಿಜೆಪಿ ಚುನಾವಣಾ ರ‍್ಯಾಲಿಯಲ್ಲಿ ಜೇಬುಗಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

ಮಾಜಿ ಶಾಸಕರಾದ ಕೆಜಿ ಬೋಪಯ್ಯ, ಅಪ್ಪಚ್ಚು ರಂಜನ್ ಸೇರಿದಂತೆ ಕನಿಷ್ಠ ಏಳು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಪರ್ಸ್ ಕಳವಾಗಿದೆ.

20,000 ನಗದು, ಹಲವು ಕಾರ್ಡ್‌ಗಳು ಮತ್ತು ಗುರುತಿನ ಚೀಟಿಗಳನ್ನು ಕಳೆದುಕೊಂಡಿರುವುದಾಗಿ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ಗುತ್ತಿಗೆದಾರನಾಗಿರುವ ಮತ್ತೋರ್ವ ಬಿಜೆಪಿ ಕಾರ್ಯಕರ್ತ ಸುಮಾರು 50,000 ರೂಪಾಯಿಗಳನ್ನು ಕಳೆದುಕೊಂಡಿರುವುದಾಗಿ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ಒಟ್ಟು ಸುಮಾರು 5 ಲಕ್ಷ ರೂಪಾಯಿ ನಗದನ್ನು ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

You may have missed

error: Content is protected !!