ಬರೋಬ್ಬರಿ 5.250 ಕೆಜಿ ಚಿನ್ನಾಭರಣ ವಶಕ್ಕೆ ಪಡೆದ ಪೊಲೀಸರು

ಚಿತ್ರದುರ್ಗ: ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ದಾಖಲೆ ಇಲ್ಲದೇ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಹಿರಿಯೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 5 ಕೆಜಿ 250 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.