April 12, 2025

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

0

ಮಂಗಳೂರು : ಆಂಧ್ರಪ್ರದೇಶದಿಂದ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36) ಬಂಧಿತ ಆರೋಪಿಯಾಗಿದ್ದಾನೆ.

ಈತ ಸಣ್ಣ ಸಣ್ಣ ಪ್ಯಾಕೆಟ್‌ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.

 

 

ಆರೋಪಿಯಿಂದ ಗೂಡ್ಸ್ ಟೆಂಪೋ. 1.50 ಲಕ್ಷ ರೂ.ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತಿನ ಮೌಲ್ಯ 9,11,500 ರೂ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!