February 4, 2026

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವುಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

0
image_editor_output_image-1122034121-1711647308987

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ  ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಗುರುವಾರ ರಾತ್ರಿ ಶೇಖರ್ ಬಂಗೇರ ಹೇರಾಜೆ(65) ಎಂಬವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ (19) ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.

ಮೃತಪಟ್ಟ ಶೇಖರ್ ಬಂಗೇರ ಹೇರಾಜೆ ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿಯಾಗಿದ್ದು, ಮುಗ್ಗ ಗುತ್ತು ಮನೆತನದ ಟ್ರಸ್ಟ್ ಕೋಶಾಧಿಕಾರಿ, ಲಾಯಿಲ ರಾಘವೇಂದ್ರ ಮಠದ ಕೋಶಾಧಿಕಾರಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.

Leave a Reply

Your email address will not be published. Required fields are marked *

error: Content is protected !!