ಗುದದ್ವಾರಕ್ಕೆ ಏರ್ ಪ್ರೆಶರ್ ಗಾಳಿ ಬಿಟ್ಟ ಸ್ನೇಹಿತ: ಯುವಕ ಸಾವು

ಬೆಂಗಳೂರು : ಏರ್ ಪ್ರೆಶರ್ ಪೈಪ್‌ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗೆ ಕರುಳು ಬ್ಲಾಸ್ಟ್ ಆಗಿ ಯುವಕ ಮೃತಪಟ್ಟಿದ್ದಾನೆ.
ಹುಡುಗಾಟದಲ್ಲಿ ಆಡಿದ ಆಟ ಘನಘೋರ ಅಂತ್ಯ ಕಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಯೋಗೀಶ್(28) ಮೃತ ಯುವಕ.
ಮಾರ್ಚ್ 25ರಂದು ಬೈಕ್ ರಿಪೇರಿಗಾಗಿ ಸಂಪಿಗೆಹಳ್ಳಿಯ ಸಿಎನ್‌ಸಿ ಬೈಕ್ ಸರ್ವೀಸ್ ಸೆಂಟರ್‌ಗೆ ಯೋಗೀಶ್ ಎಂಬ ಯುವಕ ತೆರಳಿದ್ದ.
ಅದೇ ಸರ್ವೀಸ್ ಸೆಂಟರ್‌ನಲ್ಲಿ ಯೋಗೀಶ್ ಸ್ನೇಹಿತ ಮುರುಳಿ ಎಂಬಾತ ಕೆಲಸ ಮಾಡುತ್ತಿದ್ದ. ಸ್ನೇಹಿತರಿಬ್ಬರೂ ಒಬ್ಬರಿಗೊಬ್ಬರು ತರ್ಲೆ, ತಂಟೆ ಮಾಡಿಕೊಂಡು ಆಟವಾಡುತ್ತಿದ್ದರು. ಸರ್ವೀಸ್ ಸೆಂಟರ್‌ನಲ್ಲಿದ್ದ ಏರ್ ಪ್ಲೇಶರ್ ಪೈಪ್‌ನಿಂದ ಇಬ್ಬರು ಆಟ ಆಡುತ್ತಿದ್ದರು.
ಮೊದಲಿಗೆ ಮುರುಳಿ, ಯೋಗೀಶ್‌ನ ಮುಖ ಹಾಗೂ ಹೊಟ್ಟೆಗೆ ಗಾಳಿ ಬಿಟ್ಟಿದ್ದ. ಇದಾದ ಬಳಿಕ ಯೋಗಿಶ್ ಗುದದ್ವಾರಕ್ಕೆ ಏರ್ ಪ್ಲೇಶರ್‌ನಿಂದ ಗಾಳಿ ಬಿಟ್ಟಿದ್ದಾನೆ. ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಯೋಗೇಶ್ ಹೊಟ್ಟೆ ಊದಿಕೊಂಡು ಕರುಳು ಬ್ಲಾಸ್ಟ್ ಆಗಿದೆ.
ತಕ್ಷಣ ಯೋಗೀಶ್ ನರಳಾಟ ಕಂಡು ಮುರುಳಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಗಿಶ್ ಮೃ*ತಪಟ್ಟಿದ್ದಾನೆ.