ಸುಲ್ತಾನ ತಾಜ್ ಕೊಲೆ ಪ್ರಕರಣ: ವರ್ಷದ ಬಳಿಕ ಆರೋಪಿಯ ಬಂಧನ

ಕೋಲಾರ: ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ ನಂತರ ಶವಕ್ಕೆ ಕಲ್ಲು ಕಟ್ಟಿ ಕೆರೆಯಲ್ಲಿ ಬಿಸಾಡಿರುವ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 2023 ಏಪ್ರಿಲ್ 19 ರಂದು ಕೋಲಾರ ತಾಲ್ಲೂಕಿನ ಅಮ್ಮೇರಹಳ್ಳಿ ಕೆರೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರ ಶವವೊಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿತ್ತು.
ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ ನಂತರ ಶವಕ್ಕೆ ಕಲ್ಲು ಕಟ್ಟಿ ಕೆರೆಯಲ್ಲಿ ಬಿಸಾಡಿರುವುದು ತಿಳಿದು ಬಂದಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಗೆ ಮೃತಳ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಆದರೆ, ಬೆನ್ನು ಬಿಡದೆ ನಿರಂತವಾಗಿ ಮೃತ ಮಹಿಳೆಯ ಸುಳಿವಿನ ಜಾಡು ಹಿಡಿದಿದ್ದ ಪೊಲೀಸರಿಗೆ ಬರೊಬ್ಬರಿ ಒಂದು ವರ್ಷದ ನಂತರ ಮೃತಳ ಗುರುತು ಪತ್ತೆಯಾಗಿದ್ದು, ಕೊಲೆ ಮಾಡಿ ಮಾಡಿದ ಆರೋಪಿಗಳನ್ನು ಕೂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಷ್ಟಕ್ಕೂ ಕೊಲೆಯಾದ ಮಹಿಳೆ ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಗರದ ರಾಮರೆಡ್ಡಿ ಕಾಲೋನಿಯ ಸುಲ್ತಾನಾ ತಾಜ್, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಅಬ್ರಾರ್ ಅಹಮದ್ ಕೊಲೆ ಮಾಡಿದ ಆರೋಪಿ ಎನ್ನಲಾಗಿದ್ದು, ಆತನನ್ನು ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದು. ಅವರಿಂದ ಒಂದು ಕಾರ್, ಹಾಗೂ ಕೊಲೆಗೆ ಬಳಸಿದ್ದ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.