ಸಂಸದ ನಳಿನ್ ಕುಮಾರ್ ಕಟೀಲ್ ಗೆ ಜವಾಬ್ದಾರಿ ನೀಡಿದ BJP
ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ನಾಯಕರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೊಸ ಜವಾಬ್ದಾರಿ ನೀಡಿದ್ದಾರೆ.
ಕಟೀಲ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೇರಳ ರಾಜ್ಯದ ಸಹಪ್ರಭಾರಿಯಾಗಿದ್ದಾರೆ. ಈ ಬಾರಿ ಬಿಜೆಪಿಯಿಂದ ಕೇರಳದಲ್ಲಿ ಘಟಾನುಘಟಿ ನಾಯಕರು ಕಣಕ್ಕೆ ಇಳಿದಿದ್ದಾರೆ.
ತ್ರಿಶೂರ್ ನಿಂದ ಖ್ಯಾತ ನಟ ಸುರೇಶ್ ಗೋಪಿ, ತಿರುವನಂತಪುರದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಅಟ್ಟಿಂಗಲ್ ನಿಂದ ವಿ. ಮುರಳೀಧರನ್ ಸ್ಪರ್ಧೆಯಲ್ಲಿದ್ದಾರೆ. 2019 ರಲ್ಲಿ ಬಿಜೆಪಿಯಿಂದ ಯಾರೂ ಗೆದ್ದಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರದ ಬಿಜೆಪಿ ಮುಖಂಡರು ಈ ಬಾರಿ ಕನಿಷ್ಟ ಮೂರರಿಂದ ನಾಲ್ಕು ಸ್ಥಾನಗಳನ್ನು ಜಯಿಸಲೇಬೇಕೆಂಬ ಪಣ ತೊಟ್ಟಿದ್ದಾರೆ.





