March 20, 2026

ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರ ಆಸ್ತಿ ಮೊತ್ತ ಎಷ್ಟು ಗೊತ್ತೇ?

0
image_editor_output_image-147700267-1711704165419.jpg

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಏಪ್ರಿಲ್ 4ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಲ್ಲಿಸಿರುವ ನಾಮಪತ್ರ ಅಫಿಡವಿಟ್‌ ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.

ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ.
ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.

ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ., ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ., ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ., ಒಟ್ಟು 9,62,010 ರೂ. ಗಳ ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!