August 13, 2026

ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

0
image_editor_output_image248268971-1711754956970.jpg

ಬೀದರ್: ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ.

ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ದಾಸರ್ (27) ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ.

ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‍ನ್ನು ಜನ ಪರಿಶೀಲಿಸಿದಾಗ ದಾಸರ್‍ನ ಮೃತದೇಹ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!