February 1, 2026

ಕಾಪು ಪೊಲೀಸ್ ಠಾಣೆಯ ಮಹಿಳಾ ಪೇದೆ ಆತ್ಮಹತ್ಯೆ

0
image_editor_output_image-781446420-1711783517805.jpg

ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 29 ವರ್ಷದ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡವರು. ಜ್ಯೋತಿ ಬಾಗಲಕೋಟೆ ಮೂಲದವರು.

ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಜ್ಯೋತಿ ಪೊಲೀಸ್ ಕ್ವಾಟ್ರಸ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಪೊಲೀಸ್ ಸಿಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!