ಕುಂದಾಪುರ: ಅಡಿಕೆ ಕಳವು ಪ್ರಕರಣ: 4.50 ಲಕ್ಷ ರೂ.ಮೌಲ್ಯದ ಸೊತ್ತು ಸಹಿತ ಮೂವರ ಬಂಧನ
ಸಂಗ್ರಹ ಚಿತ್ರ
ಕುಂದಾಪುರ: ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಗುಲ್ವಾಡಿ ಗ್ರಾಮದ ಅಮೀರ್ ಝನುದ್ದೀನ್, ಭಟ್ಕಳದ ಮೊಹಮ್ಮದ್ ಮುನಾವರ್, ನಿಸಾರ್ ಅಲಿಯಾಸ್ ಆಸೀಫ್ ಅನ್ನಾರ್ ಬಂಧಿತರು.
ಬಂಧಿತರಿಂದ 11.25 ಕ್ವಿಂಟಾಲ್ ಸಿಪ್ಪೆ ಅಡಿಕೆ , 40 ಕೆ.ಜಿ. ಒಣ ಅಡಿಕೆ, ಮತ್ತು ಕೃತ್ಯಕ್ಕೆ ಬಳಸಿದ್ದ ಪಿಕ್ ಆಪ್ ವಾಹನ ಹಾಗೂ ಸ್ಕೂಟರ್ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ಮೌಲ್ಯ 4 ಲಕ್ಷದ 5 ಸಾವಿರದ 750 ರೂಪಾಯಿ ಎಂದು ಅಂದಾಜಿಸಲಾಗಿದೆ.