November 21, 2024

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಫೈಟ್: ಇಬ್ಬರ ಜಗಳ ಮೂರನೇಯವರಿಗೆ ಲಾಭ

0

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ.

ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಕೆ.ವಿ ಗೌತಮ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ. ಇದರೊಂದಿಗೆ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎನ್ನುವುದು ಕೋಲಾರ ವಿಚಾರದಲ್ಲಿ ನಿಜವಾಗಿದೆ.

ಕರ್ನಾಟಕದಿಂದ ಲೋಕಸಭೆಗೆ ಬಾಕಿಯಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಶುಕ್ರವಾರವೇ ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ ಕೋಲಾರವೇ ಕಗ್ಗಂಟಾಗಿತ್ತು.

ಪರಿಶಿಷ್ಟ ಜಾತಿ ಎಡಗೈ ಸಮುದಾಯಕ್ಕೆ ಸೇರಿದ ಮಾಜಿ ಮೇಯರ್‌ ವಿಜಯಕುಮಾರ್‌ ಪುತ್ರ ಗೌತಮ್‌ ಅವರಿಗೆ ಕೋಲಾರ ಟಿಕೆಟ್ ಸಿಕ್ಕಿದೆ. ಇಂದು ಅಧಿಕೃತವಾಗಿ ಘೋಷಣೆಯಾಗಿದೆ.

Leave a Reply

Your email address will not be published. Required fields are marked *

error: Content is protected !!