March 17, 2026

ಕಡಬ: ಅಕ್ರಮ ದನ ಸಾಗಾಟದ ಕಾರು ವ್ಯಕ್ತಿಗೆ ಡಿಕ್ಕಿ ಹೊಡೆದು ಪರಾರಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಬಲಿ: ಕಡಬದಲ್ಲಿ ಜಮಾಯಿಸಿದ ಕಾರ್ಯಕರ್ತರು

0
image_editor_output_image879546847-1711824842813

ಕಡಬ: ಅಕ್ರಮ ದನ ಸಾಗಾಟದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ವಿಠಲ ರೈಯವರು ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದು, ವಿಠಲ ರೈಯವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಆರೋಪಿಗಳು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ| ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಕಡಬ ಸಮುದಾಯ ಆರೋಗ್ಯ ಕೇಂದ್ರದ ಬಳಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಬರುವಂತೆ ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!