March 17, 2026

ಮಂಗಳೂರಿನ‌ ಬಂದರಿನಲ್ಲಿ ಮುಸ್ಲಿಮರಿಗೆ ಮೀನು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರದು: ಮೇಯರ್ ಸುಧೀರ್ ಶೆಟ್ಟಿ

0
image_editor_output_image-800280894-1711841591353.jpg

ಮಂಗಳೂರು: ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಅಭ್ಯರ್ಥಿ ಬೃಜೇಶ್ ಚೌಟ ಪರವಾಗಿ ಬಿಜೆಪಿ ಮೀನುಗಾರ ಪ್ರಕೋಷ್ಟ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಭಾಷಣ ಮಾಡಲಾಗಿದೆ.

ಮೊಗವೀರರನ್ನು ಮುಸ್ಲಿಮರ ವಿರುದ್ದ ಎತ್ತಿಕಟ್ಟುವ, ಆ ಮೂಲಕ ಮತೀಯ ದ್ವೇಷವನ್ನು ಹುಟ್ಟು ಹಾಕಿ ಚುನಾವಣೆಯಲ್ಲಿ ರಾಜಕೀಯ ಲಾಭ ಗಿಟ್ಟಿಸುವ ಯತ್ನ ನಡೆಸಿರುತ್ತಾರೆ.

ದ‌.ಕ. ಜಿಲ್ಲಾ ಸಮಿತಿ ಬಿಜೆಪಿ ನಾಯಕರ ರಾಜಕೀಯ ದುರುದ್ದೇಶದ ಪರಸ್ಪರ ಎತ್ತಿಕಟ್ಟುವ ಮಾತುಗಳನ್ನು ಸಿಪಿಐಎಂ ಬಲವಾಗಿ ಖಂಡಿಸುತ್ತಿದೆ.

ಮೇಯರ್ ಸುಧೀರ್ ಶೆಟ್ಟಿ ಹಾಗೂ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ವಿರುದ್ದ ಚುನಾವಣಾ ಆಯೋಗ ಕ್ರಿಮಿನಲ್ ಮೊಕದ್ದಮೆ ಹೂಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂ ಆಗ್ರಹಿಸುತ್ತದೆ.

ಮೀನುಗಾರಿಕೆ ಉದ್ಯಮದಲ್ಲಿ ಪರಸ್ಪರ ಅನ್ಯೋನ್ಯತೆಯಲ್ಲಿ ತೊಡಗಿಸಿಕೊಂಡಿರುವ ಮೊಗವೀರರು ಹಾಗೂ ಮುಸ್ಲಿಮರ ಮಧ್ಯೆ ಒಡಕು ಮೂಡಿಸಲು ಕೊಳಕು ಮಾತುಗಳನ್ನು ಆಡಿದ್ದಾರೆ.

ಮುಸ್ಲಿಮರಿಗೆ ಮೀನು ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಓರ್ವ ಜವಾಬ್ದಾರಿಯುತ ಮೇಯರ್ ಲೋಕಸಭಾ ಚುನಾವಣಾ ಅಭ್ಯರ್ಥಿಯ ಮುಂದೆ ಮೊಗವೀರರಿಗೆ ದ್ವೇಷ ಭಾಷಣದ ಮೂಲಕ ಕರೆನೀಡುತ್ತಾರೆ.

Leave a Reply

Your email address will not be published. Required fields are marked *

You may have missed

error: Content is protected !!