ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಬೈಕ್ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು
ಹಾಸನ: ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರ್ಣಕ್ಕೀಡಾದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಕ ನಡೆದಿದೆ.
ಅಶ್ವತ್ಥ್ (42), ಸಾಗರ್ (42) ಮೃತ ದುರ್ದೈವಿಗಳು. ಮೃತರಿಬ್ಬರೂ ಅರಕಲಗೂಡು ತಾಲ್ಲೂಕಿನ ಚಿಕ್ಕ ಆಲದಹಳ್ಳಿ ಗ್ರಾಮದವರಾಗಿದ್ದಾರೆ.
ಚನ್ನರಾಯಪಟ್ಟಣದ ಕಡೆಯಿಂದ ಹಾಸನದ ಕಡೆಗೆ ಬರುತ್ತಿದ್ದ ಬೈಕ್ ಬರುತ್ತಿದ್ದರು. ಈ ವೇಳೆ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ಬದಿ ಟ್ರಕ್ ನಿಲ್ಲಿಸಿಕೊಂಡು ಅಡುಗೆ ಮಾಡುತ್ತಿದ್ದ ಚಾಲಕ ಹಾಗೂ ನಿರ್ವಾಹಕರು.
ವೇಗವಾಗಿ ಬಂದ ಬೈಕ್ ಸವಾರರು ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.





