ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತದಿಂದ ಸಾವು
ರಾಯಚೂರು: ಬಿರು ಬಿಸಿಲಿನಲ್ಲಿ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತಕ್ಕೆ ಮೃತಪಟ್ಟ ಘಟನೆ ನಡೆದಿದೆ.
ಯಾತ್ರಿಗಳ ಜೊತೆಗೆ ಶ್ರೀಶೈಲಕ್ಕೆ ಪಾದಯಾತ್ರೆ ಮಾಡುವ ವೇಳೆ ಮಾರ್ಗ ಮಧ್ಯೆ ಹೃದಯಾಘಾತದಿಂದ ಯುವಕ ಮೃತಪಟ್ಟಿದ್ದಾನೆ.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಬಳಿ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಮೂಲದ ಶ್ರೀಶೈಲ ದಡುತಿ ಎಂಬ ಯುವಕ ನಿನ್ನೆ ಬಿಸಿಲಿನ ತಾಪಕ್ಕೆ ದಣಿದಿದ್ದು ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತವಾಗಿದೆ.





