ಚುನಾವಣಾ ಪ್ರಚಾರದ ವೇಳೆ ಆರೋಗ್ಯದಲ್ಲಿ ಏರುಪೇರು: ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ.
ನಗರದ ವೈದ್ಯೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ಶಿವಣ್ಣ ಭಾನುವಾರ ದೇವನಹಳ್ಳಿ ಬಳಿ ಸಿನಿಮಾವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.