ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಂದೆ

ಕೋಲಾರ: ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು ಅನ್ನೋ ಕಾರಣಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.