ಕುಂದಾಪುರ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಸಾವನ್ನಪ್ಪಿದವರು.
ಗಂಭೀರ ಗಾಯಗೊಂಡವನನ್ನು ಫಾಜ್ಲು ಎಂಬುವರ ಮಗ ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಎಂದು ಗುರುತಿಸಲಾಗಿದೆ.
ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.