ತುಮಕೂರು: ಬಿಜೆಪಿ ಕಾರ್ಯಕರ್ತನ ಹತ್ಯೆ
ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ ಮಾಡಿರುವ ದುರ್ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಬಿ.ಕೆ.ಹಳ್ಳಿ ಕ್ರಾಸ್ ನಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ಅಪ್ಪಾಜಿಹಳ್ಳಿ ನಿವಾಸಿ ಪ್ರಸನ್ನ ಕುಮಾರ್ (46) ಎಂಬವರನ್ನು ಬರ್ಬರ ಹತ್ಯೆ ಮಾಡಲಾಗಿದೆ. ಪ್ರಸನ್ನ, ತಾಲೂಕು ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕೂಡ ಆಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದಿಲ್ಲ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.





