March 17, 2026

BJP-JDS ಒಂದೇ ದೇಹದ ಎರಡು ಕಣ್ಣುಗಳು: ಎಚ್.ಡಿ.ಕುಮಾರಸ್ವಾಮಿ

0
image_editor_output_image-2044989245-1712100847142.jpg

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮಯುದ್ಧ ನಡೆಯುತ್ತಿದೆ. ಇಲ್ಲಿಯ ಅಧರ್ಮದ ರಾಜಕಾರಣಕ್ಕೆ ಉತ್ತರ ಕೊಡಲು ಮಂಜುನಾಥ್ ಅವರನ್ನು ಕಣಕ್ಕಿಳಿಸಿರೋದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಮಂಜುನಾಥ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ಅಮಿತ್ ಶಾ ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ ಎಂದರು.

ಬಿಜೆಪಿ-ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳಿದ್ದ ಹಾಗೆ. ಕಳೆದ ಎರಡು ಚುನಾವಣೆಯಲ್ಲಿ ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದೀರಿ. ಇಡೀ ರಾಜ್ಯದಲ್ಲಿ ನಾನು ಚುನಾವಣೆಗೆ ಕೆಲಸ ಮಾಡ್ತಾ ಇದ್ದೀನಿ. ನನ್ನ ಹೃದಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿದೆ. ನಾನು ರಾಮನಗರ ಬಿಟ್ಟು ಹೋಗಲ್ಲ. ಇವತ್ತು ಅನಿವಾರ್ಯವಾಗಿ ಬಿಜೆಪಿ ಜೊತೆ ಅಭಿವೃದ್ಧಿಗಾಗಿ ಕೈ ಜೋಡಿಸಿದ್ದೇವೆ. ದಯಮಾಡಿ ನನ್ನ ಚನ್ನಪಟ್ಟಣದ ಜನರು ಕ್ಷಮಿಸಬೇಕು ಎಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!