ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ಬುಧವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆ ನೀಡಿದರು. ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ದ.ಕ ಜಿಲ್ಲಾ ಉಸ್ತವಾರಿ ಸಚಿವ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಆದ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಜೆ.ಆರ್.ಲೋಬೋ, ಮುಖಂಡ ಇನಾಯತ್ ಅಲಿ ಸಹಿತ ಹಲವರು ಭಾಗವಹಿಸಿದ್ದರು.